ಸುಳ್ಯ: ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ (ಮೇ 5, ಮಂಗಳವಾರ) ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ಸುಳ್ಯದ ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರಮುಖ ಪ್ರದೇಶಗಳು:

11 ಕೆ.ವಿ ಫೀಡರುಗಳಾದ ಸುಳ್ಯ-1 ಕೆವಿಜಿ, ಸುಳ್ಯ-2 ಶ್ರೀರಾಂಪೇಟೆ, ಜಬಲೆ, ಡಿಪೋ, ತೋಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಹಾಗೂ ಮಂಡೆಕೋಲು ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

​ಈ ತುರ್ತು ನಿರ್ವಹಣಾ ಕಾರ್ಯದ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಅಧಿಕಾರಿಗಳು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *