
ಜಿಲ್ಲೆ ಯಲ್ಲಿಯೇ ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ತಾಲೂಕು ಕೇಂದ್ರವಾದ ಸುಳ್ಯದಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್ ಪ್ರಾರಂಭಿಸಬೇಕೆಂದು ಸಚಿವರಾದ ಬಿ. ಝೆಡ್. ಝಮೀರ್ ಅಹ್ಮದ್ ಖಾನ್ ರವರಿಗೆ ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ ಮನವಿ ಸಲ್ಲಿಸುದ್ದರು ಸದ್ರಿ ಪತ್ರದಲ್ಕಿ ಸಚಿವರು ಷರಾ ಬರೆದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಸೂಚಿಸಿರುತ್ತಾರೆ
ಕಲ್ಯಾಣ ಇಲಾಖೆಯ ನಿರ್ದೇಶಕರಾದ ಜೀಲಾನಿ. ಹೆಚ್. ಮೊಕಾಶಿ ಯವರನ್ನು ಭೇಟಿಯಾಗಿ ಚರ್ಚಿಸಿದಾಗ ಮುಂದಿನ ಶೈಕ್ಷಣಿಕ ವರ್ಷದಿಂದ ಸುಳ್ಯ ತಾಲೂಕು ಕೇಂದ್ರದಲ್ಲಿ ಮೈನಾರಿಟಿ ಹಾಸ್ಟೆಲ್ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಿರ್ದೇಶಕರು ತಿಳಿಸಿರುತ್ತಾರೆ ಎಂದು ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ತಿಳಿಸಿರುತ್ತಾರೆ
