
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕಾನೂನು ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀಧರ ಎಂ.ಎಂ. ರವರ ಆದೇಶದ ಮೇರೆಗೆ ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ಸಮೃದ್ಧ್ ಸುರಜ್ ಹೆಗ್ಡೆ ರವರ ಅನುಮೋದನೆಯೊಂದಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರೋಡೆಲ್ ಸಿಂಗ್ ಭಂಡಾರಿ ರವರ ಶಿಫಾರಸಿನ ಮೇರೆಗೆ ಯುವ ನ್ಯಾಯವಾದಿಗಳಾದ ಮೊಹಮ್ಮದ್ ರಿಯಾಜ್ ಪೈಂಬಚಾಲ್ ಅವರನ್ನು ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.
ಈ ಹಿಂದೆ ಇವರು ಎನ್‌ಎಸ್‌ಯುಐ ಸುಳ್ಯ ತಾಲೂಕು ಉಪಾಧ್ಯಕ್ಷರಾಗಿ, ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿ ಹಾಗೂ ಆಲ್ ಕಾಲೇಜ್ ಸ್ಟೂಡೆಂಟ್ಸ್ ಯೂನಿಯನ್‌ನ ಕಾರ್ಯದರ್ಶಿಯಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಇವರು ಗ್ರೀನ್ ವ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್, ಸುಳ್ಯ ಇದರ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಇವರು ಹಿರಿಯ ನ್ಯಾಯವಾದಿ ಹಾಗೂ ಕೆಪಿಸಿಸಿ ಲೀಗಲ್ ಸೆಲ್‌ನ ಪ್ರಧಾನ ಕಾರ್ಯದರ್ಶಿಗಳಾದ ಮೂಸಕುಂಞಿ ಪೈಂಬಚಲ್ ಅವರ ಪುತ್ರರಾಗಿದ್ದಾರೆ.







