ಮಡಿಕೇರಿ-ಸುಳ್ಯ ಹೆದ್ದಾರಿಯಲ್ಲಿ ಸೇತುವೆಗೆ ಡಿಕ್ಕಿ ಹೊಡೆದ ಕಾರು: ಕೂದಲೆಳೆಯ ಅಂತರದಲ್ಲಿ ತಪ್ಪಿದ ದುರಂತ, ಪ್ರಯಾಣಿಕರು ಸುರಕ್ಷಿತ
ದೇವರಕೊಲ್ಲಿ: ಮಡಿಕೇರಿ-ಸುಳ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಹೋಂಡಾ ಎಲಿವೇಟ್ (Honda Elevate) ಕಾರೊಂದು ರಸ್ತೆ ಬದಿಯ ಸೇತುವೆಯ ತಡೆಗೋಡೆಗೆ ಬಲವಾಗಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರು ಕೆಳಕ್ಕೆ ಉರುಳದೆ ಕೂದಲೆಳೆಯ ಅಂತರದಲ್ಲಿ ನಿಂತಿದ್ದರಿಂದ ಸಂಭವಿಸಬಹುದಾಗಿದ್ದ ದುರಂತವೊಂದು ತಪ್ಪಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ತಕ್ಷಣವೇ ಸುರಕ್ಷತಾ ಏರ್‌ಬ್ಯಾಗ್‌ಗಳು ತೆರೆದುಕೊಂಡಿವೆ. ಪರಿಣಾಮವಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯ ಬದಿಯಲ್ಲೇ […]
Read More