ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬಿ.ಸಿ.ಎ ಮುನ್ನಡೆಸುತ್ತಿರುವ ‘ಟೆಕ್ ಕೆಡೆಟ್’ನಿಂದ “software as a solution – Technical Session” ಸೆಪ್ಟಂಬರ್ 27 ರ ಶನಿವಾರ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಗಳಾಗಿ ಸ್ಕಂದ ಎನ್ ಭಟ್, ಸಿ.ಇ.ಒ, Ckey software ಅವರು ವಿಭಿನ್ನವಾಗಿ, ಈಗಿನ ಆಧುನಿಕ ತಂತ್ರಜ್ಞಾನವು ಮಕ್ಕಳಿಗೆ ಸರಳವಾಗಿ ಅರ್ಥ ಆಗುವಂತೆ ಪ್ರಾಯೋಗಿಕವಾಗಿ ವಿವರಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾ.ರುದ್ರಕುಮಾರ ಎಂ.ಎಂ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭಹಾರೈಸಿದರು.

ವೇದಿಕೆಯಲ್ಲಿ S.W.O ರತ್ನಾವತಿ ಡಿ, IQAC ಸಂಯೋಜಕಿ ಡಾ.ಮಮತಾ ಕೆ, ಬಿ.ಸಿ.ಎ ವಿಭಾಗದ ಮುಖ್ಯಸ್ಥೆ ಹಾಗೂ ಸಂಯೋಜಕಿ ಭವ್ಯ ಮನು ಪೆರುಮುಂಡ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ವಿವಿಧ ಮನರಂಜನಾ ಸ್ಪರ್ಧೆಗಳು ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Leave a Reply

Your email address will not be published. Required fields are marked *