ಮೂಡಬಿದ್ರೆಯ ಅಳ್ವಾಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ಕಾಲೇಜು ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ತೃತೀಯ ಬಿ.ಕಾಂ ವಿದ್ಯಾರ್ಥಿ ಅಭಿನಂದನ್ ಬಿ.ಎಸ್. ಅವರು 79 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದರೆ, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಶ್ರೀಶ್ಮಾ ಅವರು 47 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಈ ಸಾಧನೆಗೆ ಮಾಜಿ ರಾಷ್ಟ್ರೀಯ ಚಾಂಪಿಯನ್ ತರಬೇತುದಾರ ಶ್ರೀ ರಮೇಶ್ ರವರು ಮಾರ್ಗದರ್ಶನ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಲೆ. ಸೀತಾರಾಮರವರು ಪ್ರೋತ್ಸಾಹ ನೀಡಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿ ವಿಜೇತರನ್ನು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *