
ಇಂದು ಮುಂಜಾನೆ ಸುರಿದ ಮಳೆಯಿಂದಾಗಿ ರಸ್ತೆ ಜಾರುವಂತಾಗಿದ್ದು, ಓಡಬೈ ಸಮೀಪ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವರದಿಯಾಗಿದೆ.
ಬೆಳಗಿನ ಜಾವದಿಂದಲೇ ಈ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಈ ವೇಳೆ ಮಾರ್ಗಮಧ್ಯೆ ಸಾಗುತ್ತಿದ್ದ ಪಿಕಪ್ ವಾಹನವು ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ದಿಢೀರನೆ ರಸ್ತೆ ಬದಿಗೆ ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಪಲ್ಟಿಯಾದ ರಭಸಕ್ಕೆ ವಾಹನಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.








