Nammasullia, ಆಗಸ್ಟ್ 10: ಬೆಂಗಳೂರಿಗರ ಬಹುದಿನಗಳ ಕನಸು ಇಂದು ನನಸಾಗುತ್ತಿದೆ. ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಸಿರು ನಿಶಾನೆ ತೋರಿಸಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನಲೆ ನಗರದ ಹಲವೆಡೆ ಸಂಚಾರ ಬದಲಾವಣೆ ಮಾಡಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಸದ್ಯ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:30ರವರೆಗೆ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಸಂಚಾರ ನಿರ್ಬಂಧ
- ಬನ್ನೇರುಘಟ್ಟ ರಸ್ತೆ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್‌ವರೆಗೆ
- ಕನಕಪುರ ರಸ್ತೆ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ನಾಯಂಡಹಳ್ಳಿ ನೈಸ್ ಟೋಲ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ಸೋಂಪುರ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ಪಿಇಎಸ್ ಕಾಲೇಜು ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ಕೆಂಗೇರಿ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ಮಾಗಡಿ ರಸ್ತೆ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ಮಾಧವರ ರಸ್ತೆ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
- ಪಾರ್ಲೆ ಬಿಸ್ಕಟ್ಸ್ ಫ್ಯಾಕ್ಟರಿ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
ಪರ್ಯಾಯ ಮಾರ್ಗಗಳು
ನೆಲಮಂಗಲ ನೈಸ್ ಟೋಲ್-ಮಾಗಡಿ ರಸ್ತೆ ನೈಸ್ ಟೋಲ್-ಕೆಂಗೇರಿ ನೈಸ್ ಟೋಲ್-ಕನಕಪುರ ಟೋಲ್ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಸಂಚರಿಸುವ ವಾಹನಗಳನ್ನು ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ತಡೆದು, ಬನ್ನೇರುಘಟ್ಟ ರಸ್ತೆಗೆ ವಾಹನಗಳನ್ನು ಡೈವರ್ಶನ್ ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಚಲಿಸುವ ವಾಹನಗಳು ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆ ಮಾರ್ಗವಾಗಿ-ನೈಸ್ ರಸ್ತೆ ಜಂಕ್ಷನ್-ಶೇರ್‌ವುಡ್ ಜಂಕ್ಷನ್-ಕೋಳಿಫಾರಂಗೇಟ್ ಜಂಕ್ಷನ್-ಬನ್ನೇರುಘಟ್ಟ ಗಾಮ-ಜಿಗಣಿ ಮಾರ್ಗವಾಗಿ ಹೊಸೂರು ರಸ್ತೆ/ಎಲೆಕ್ಟ್ರಾನಿಕ್ ಸಿಟಿ ಕಡೆಗೆ ತಲುಪಬಹುದಾಗಿದೆ.

