ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ ಆರ್ಭಟಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ತಿಳಿಸಿದಂತೆ, ಆಗಸ್ಟ್ 29, 2025 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಪಾಲಕರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ವಿನಂತಿಸಿದೆ.