ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ.

🚨 ಜಿಲ್ಲಾಡಳಿತದ ಪ್ರಮುಖ ಮುಂಜಾಗ್ರತಾ ಕ್ರಮಗಳು:

  • ನಾಳೆ ಶಾಲಾ-ಕಾಲೇಜುಗಳಿಗೆ ರಜೆ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ನಾಳೆ, ದಿನಾಂಕ 02.07.2026 ರಂದು ರಜೆಯನ್ನು ಘೋಷಿಸಲಾಗಿದೆ.
  • ಪೋಷಕರಿಗೆ ಕಟ್ಟುನಿಟ್ಟಿನ ಸೂಚನೆ: ನೀರಿರುವ ತಗ್ಗು ಪ್ರದೇಶ, ಕೆರೆ, ನದಿ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಕಡ್ಡಾಯವಾಗಿ ಜಾಗ್ರತೆ ವಹಿಸಬೇಕಾಗಿ ವಿನಂತಿಸಲಾಗಿದೆ.
  • ಮೀನುಗಾರರಿಗೆ ನಿರ್ಬಂಧ: ಮಳೆಯ ತೀವ್ರತೆ ಹೆಚ್ಚಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
  • ಪ್ರವಾಸಿಗರಿಗೆ ಎಚ್ಚರಿಕೆ: ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ ತೀರ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
  • ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರುವಂತೆ ಆದೇಶ: ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೆ ನಿರ್ವಹಿಸಬೇಕು ಹಾಗೂ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು.
  • ಕಾಳಜಿ ಕೇಂದ್ರಗಳ ಸ್ಥಾಪನೆ: ತುರ್ತು ಪರಿಸ್ಥಿತಿಯನ್ನು ಎದುರಿಸಲು ಪ್ರತಿ ತಾಲೂಕುಗಳಲ್ಲಿ ತಕ್ಷಣವೇ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿಟ್ಟುಕೊಳ್ಳಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಸಹಾಯವಾಣಿ ಮಾಹಿತಿ: ಪ್ರಕೃತ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ: 0824-2220588 ಅನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *