ಗುರುಪುರದಲ್ಲಿ ಆಮಂತ್ರಣ ಪತ್ರ ಬಿಡುಗಡೆ
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರವರ ಸಾರ್ವಜನಿಕ ಸನ್ಮಾನ ಸಮಿತಿ ವತಿಯಿಂದ ದಿನಾಂಕ ನವೆಂಬರ್ 23ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ (ಟೌನ್ ಹಾಲ್) ಜರುಗಲಿರುವ ಸಾರ್ವಜನಿಕ ಸನ್ಮಾನ ಸಮಾರಂಭದ ಆಮಂತ್ರಣ ಪತ್ರವನ್ನು ಇಂದು ನ.17 ರಂದು ಗುರುಪುರದಲ್ಲಿ ಬಿಡುಗಡೆಗೊಳಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮರಾಜ್ ಪೂಜಾರಿ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರಿಗೆ ಆಮಂತ್ರಣ ಪತ್ರವನ್ನು ಹಸ್ತಾಂತರಿಸುವ ಮೂಲಕ ಅಧಿಕೃತವಾಗಿ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಡಾ. ಅನ್ಶುಮಂತ್ ಕೆಪಿಸಿಸಿ ವೀಕ್ಷಕರು, ಟಿ.ಎಂ. ಶಾಹಿದ್ ತೆಕ್ಕಿಲ್ ಸ್ವಾಗತ ಸಮಿತಿ ಅಧ್ಯಕ್ಷರು, ಸುರೇಂದ್ರ ಕಮ್ಮಳ್ಳಿ ಮಂಗಳೂರು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು, ಪದ್ಮನಾಭ ಕೋಟ್ಯಾನ್ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪೃಥ್ವಿರಾಜ್ ಕೆಪಿಸಿಸಿ ಸದಸ್ಯರು ಹಾಗೂ ಇತರ ಪ್ರಮುಖ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದು ಶುಭ ಹಾರೈಸಿದರು.
