ಸಂಪಾಜೆ: ಇಲ್ಲಿನ ಸಂಪಾಜೆಯಲ್ಲಿ ಇಂದು ಅಪರಾಹ್ನ ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ, ಕಾರು ಮತ್ತು ಚಾಲಕನನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಪಘಾತ ನಡೆಸಿ ಪರಾರಿಯಾಗಿದ್ದ KA 09 MG 3700 ನಂಬರಿನ ಕಾರನ್ನು ಪತ್ತೆಹಚ್ಚಲಾಗಿದ್ದು, ಪ್ರಸ್ತುತ ಕಾರು ಹಾಗೂ ಚಾಲಕನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಘೋರ ಅಪಘಾತದಲ್ಲಿ ರಿಕ್ಷಾ ಚಾಲಕರಾಗಿದ್ದ, ಕೊಡಗು ಸಂಪಾಜೆ ಗ್ರಾಮ ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸುಂದರ ಚೆಟ್ಟಿಕಾನ (63) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಹಿಂದಿನಿಂದ ಬಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
