ಸುಳ್ಯ, ನ 1: ನಾಡಿನ ಕರಾವಳಿ ಭಾಗದ ಹಿರಿಯ ಮತ್ತು ಜನಪ್ರೀತಿಯ ಪತ್ರಕರ್ತರಾಗಿದ್ದ ಜಯಕೃಷ್ಣ ರೈ (ಜೆ.ಕೆ. ರೈ) ಸುಳ್ಯ ಅವರ ಅಕಾಲಿಕ ನಿಧನಕ್ಕೆ ಎಸ್.ಡಿ.ಪಿ.ಐ. (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ತೀವ್ರ ಸಂತಾಪ ವ್ಯಕ್ತಪಡಿಸಲಾಗಿದೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ದೀರ್ಘಕಾಲ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಜೆ.ಕೆ. ರೈ ಅವರು, ಸತ್ಯ ಮತ್ತು ನಿಷ್ಪಕ್ಷಪಾತ ವರದಿಯ ಮೂಲಕ ಸಮಾಜದ ಧ್ವನಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಾದೇಶಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವಲ್ಲಿ ಹಾಗೂ ಸಮಾಜಮುಖಿ ಚಿಂತನೆಗಳನ್ನು ಬಿತ್ತುವಲ್ಲಿ ಅವರ ಕೊಡುಗೆ ಅಪಾರವಾದುದು ಎಂದು ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮಿರಾಝ್ ಸುಳ್ಯ ಅವರು ತಮ್ಮ ಸಂತಾಪ ಸಂದೇಶದಲ್ಲಿ ಸ್ಮರಿಸಿದ್ದಾರೆ.
“ಪತ್ರಕರ್ತರಾಗಿ ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಿದ್ದ ಜೆ.ಕೆ. ರೈ ಅವರ ಅಗಲಿಕೆ ಸುಳ್ಯ ತಾಲೂಕಿನ ಪತ್ರಿಕೋದ್ಯಮ ಕ್ಷೇತ್ರಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಮತ್ತು ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ” ಎಂದು ಮಿರಾಝ್ ಸುಳ್ಯ ಅವರು ಪ್ರಾರ್ಥಿಸಿದ್ದಾರೆ.
