ಮಡಿಕೇರಿ: ಎಸ್ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಪ್ರಯಾಣಿಸುತ್ತಿದ್ದ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಶನಿವಾರ ನಡೆದಿದೆ.

ಅಬ್ದುಲ್ ಮಜೀದ್ ಅವರು ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಸಂಪೂರ್ಣ ವಾಹನ ಸುಟ್ಟು ಕರಕಲಾಗಿದೆ. ಆದರೂ, ಕಾರಿನಲ್ಲಿದ್ದ ಅಬ್ದುಲ್ ಮಜೀದ್ ಹಾಗೂ ಅವರ ಚಾಲಕ ಸಮಯ ಪ್ರಜ್ಞೆಯಿಂದ ಹೊರಬಂದಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಘಟನಾ ಸ್ಥಳದ ದೃಶ್ಯಗಳಲ್ಲಿ ಕಾರು ರಸ್ತೆ ಬದಿಯಲ್ಲಿ ಹೊತ್ತಿ ಉರಿಯುತ್ತಿರುವುದು ಕಂಡುಬಂದಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
