ಸುಳ್ಯ: ಕರ್ನಾಟಕ ರಾಜ್ಯ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು (ಸಚಿವರ ಸ್ಥಾನಮಾನ) ಆದ ಜನಾಬ್ ಟಿ.ಎಂ.ಶಾಹಿದ್ ತೆಕ್ಕಿಲ್ ಅವರು ಜನವರಿ 30 ಮತ್ತು 31 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ತಮ್ಮ ಪ್ರವಾಸದ ಅಂಗವಾಗಿ ಜನವರಿ 30 ರಂದು ಶುಕ್ರವಾರ ಬೆಳಿಗ್ಗೆ 10:30ಕ್ಕೆ ಬೆಂಗಳೂರಿನ ಸರ್ ಪುಟ್ಟಣ್ಣಚೆಟ್ಟಿ ಟೌನ್ ಹಾಲ್ ನಲ್ಲಿ ನಡೆಯುವ ಜನಮುಖಿ ಶೋಷಿತ ವೇದಿಕೆ ವತಿಯಿಂದ ಆಯೋಜಿಸಲಾದ ಶತಮಾನೋತ್ಸವ ಮತ್ತು ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಮಧ್ಯಾಹ್ನ 2:00 ಗಂಟೆಗೆ ಬೆಂಗಳೂರಿನಿಂದ ಹೊರಟು, ರಾತ್ರಿ 7:00 ಗಂಟೆಗೆ ಸುಳ್ಯ ತಾಲೂಕಿನ ಎಣ್ಮೂರು (ಎಲಿಮಲೆ) ತಲುಪಲಿದ್ದಾರೆ. ಅಲ್ಲಿ ನಡೆಯಲಿರುವ ಎಲಿಮಲೆ ನುಸ್ರತುಲ್ ಇಸ್ಲಾಂ ಅಸೋಸಿಯೇಷನ್ ಇದರ 42ನೇ ವಾರ್ಷಿಕ ಸಭೆಯಲ್ಲಿ ಮತ್ತು ಮಹಾಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮಾರನೇ ದಿನ, ಜನವರಿ 31 ರಂದು ಬೆಳಿಗ್ಗೆ 11:00 ಗಂಟೆಗೆ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯಾಲಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಹಾಗೂ ಇತರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಶಾಹಿದ್ ತೆಕ್ಕಿಲ್ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
