
ಎಸ್ ವೈ ಎಸ್ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವ ಮಾದರಿ ಮದುವೆ ಅಭಿಯಾನದ ಸಮಾರೋಪ ಸಮಾವೇಶವು ಮೇ 2ರಂದು ಪುತ್ತೂರಿನಲ್ಲಿ ನಡೆಯಲಿದೆ.
ಸಾರ್ವಜನಿಕರಲ್ಲಿ ಮಾದರಿ ಮದುವೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂಜೆ 4:00 ಗಂಟೆಗೆ ದರ್ಬೆ ವೃತ್ತದಿಂದ ಕಿಲ್ಲೆ ಮೈದಾನಕ್ಕೆ ಭವ್ಯ ಕಾಲ್ನಡಿಗೆ ಜಾಥಾ ನಡೆಯಲಿದೆ.
ಈ ಐತಿಹಾಸಿಕ ಜಾಥಾದಲ್ಲಿ ಸುನ್ನಿ ಸಂಘ ಕುಟುಂಬದ ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸಂಜೆ 6:00 ಗಂಟೆಗೆ ಕಿಲ್ಲೆ ಮೈದಾನದಲ್ಲಿ ಸಮಾರೋಪ ಸಮ್ಮೇಳನ ನಡೆಯಲಿದ್ದು, ಹಲವು ಗಣ್ಯರು ಭಾಗವಹಿಸಲಿದ್ದಾರೆ. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದ್, ಕರ್ನಾಟಕ ಜಂಯ್ಯತುಲ್ ಉಲಮಾ ರಾಜ್ಯಾಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್, ಕೇರಳ ಜಂಯ್ಯತುಲ್ ಉಲಮಾ ಕಾರ್ಯದರ್ಶಿ ಮೌಲಾನಾ ಪೇರೋಡ್ ಉಸ್ತಾದ್ ಮಾದರಿ ಮದುವೆ ವಿಷಯದ ಕುರಿತು ಪ್ರವಚನ ನೀಡಲಿದ್ದಾರೆ.
ಹಲವಾರು ಉಲಮಾ – ಉಮರಾ ನಾಯಕರು, ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ಮುಖಂಡರು ಭಾಗವಹಿಸಲಿರುವ ಈ
ಸಮಾವೇಶದಲ್ಲಿ ಜಿಲ್ಲಾ ವ್ಯಾಪ್ತಿಯ ಸುನ್ನಿ ಸಂಘ ಕುಟುಂಬದ ಎಲ್ಲಾ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.






