
ಸುಳ್ಯ: ಮಂಗಳೂರಿನಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಹೊಸ ಕಾರೊಂದು ಗಾಂಧಿನಗರದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗದಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಇಂದು ಖರೀದಿಸಿದ್ದ ಕಾರು
ಅಪಘಾತಕ್ಕೀಡಾದ ಕಾರನ್ನು ದಂಪತಿಗಳು ಇಂದಷ್ಟೇ ಖರೀದಿಸಿದ್ದರು ಎನ್ನಲಾಗಿದ್ದು, ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸುಳ್ಯದ ಗಾಂಧಿನಗರದ ತಿರುವಿನಲ್ಲಿ ಮಳೆಯಾಗುತ್ತಿದ್ದುದರಿಂದ ರಸ್ತೆ ಜಾರುತ್ತಿತ್ತೆನ್ನಲಾಗಿದೆ. ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಲುಗಡೆ ಮಾಡಲಾಗಿದ್ದ ಲಾರಿಗೆ ಜೋರಾಗಿ ಡಿಕ್ಕಿ ಹೊಡೆದಿದೆ.
ಪತ್ನಿಗೆ ಗಾಯ, ಆಸ್ಪತ್ರೆಗೆ ದಾಖಲು
ಕಾರಿನಲ್ಲಿದ್ದ ಪತಿ ಮತ್ತು ಪತ್ನಿಯ ಪೈಕಿ, ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.







