ಸುಳ್ಯ (ಮಾ. 14): ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಎದುರುಗಡೆ ನಿಂತಿದ್ದ ಯುವಕನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಶನಿವಾರ ವರದಿಯಾಗಿದೆ.

ಚೂರಿ ಇರಿತಕ್ಕೊಳಗಾದ ಯುವಕನನ್ನು ಸುಳ್ಯದ ಬೀರಮಂಗಲ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹರೀಶ್ ಜೊತೆಗಿದ್ದ ನೀತು ಎಂಬವರಿಗೂ ಗಾಯಗಳಾಗಿವೆ. ಇವರಿಬ್ಬರಿಗೂ ಪ್ರಸ್ತುತ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೃತ್ಯವೆಸಗಿದವರು ಕಾಂತಮಂಗಲದವರೆಂದು ಹೇಳಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.





