ಸುಳ್ಯ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹಾಗೂ ಎಲ್.ಪಿ.ಜಿ (LPG) ಮತ್ತು ಸಿ.ಎನ್.ಜಿ (CNG) ಗ್ಯಾಸ್ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಖಂಡಿಸಿ ಏಪ್ರಿಲ್ 27ರ ಸೋಮವಾರದಂದು ಸುಳ್ಯದಲ್ಲಿ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಯುವ ಕಾಂಗ್ರೆಸ್ ಸಮಿತಿ ಸುಳ್ಯ ಬ್ಲಾಕ್, ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ, ಯುವ ಕಾಂಗ್ರೆಸ್ ಸಮಿತಿ ಸುಳ್ಯ ವಿಧಾನಸಭಾ ಕ್ಷೇತ್ರ, ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ಸುಳ್ಯ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ನ ಎಲ್ಲಾ ಘಟಕಗಳ ಸಹಯೋಗದೊಂದಿಗೆ ಈ ಬೃಹತ್ ಪ್ರತಿಭಟನೆ ನಡೆಯಲಿದೆ.
ಏಪ್ರಿಲ್ 27ರಂದು ಸಂಜೆ 5.00 ಗಂಟೆಗೆ ಸುಳ್ಯದಲ್ಲಿ ಈ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರಿಕ್ಷಾ ಚಾಲಕರು, ಸಾರ್ವಜನಿಕರು ಹಾಗೂ ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧ್ವನಿಯಾಗುವಂತೆ ಆಯೋಜಕರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.




