ಬೆಂಗಳೂರು/ಸುಳ್ಯ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಅವರನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಮತ್ತು ಪ್ರಮುಖ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಭೇಟಿಯಾಗಿ ಗೌರವಿಸಿ, ಶುಭ ಹಾರೈಸಿದರು.
ಕೆಪಿಸಿಸಿ ನೂತನ ಸಾರಥಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆತ್ಮೀಯ ಸನ್ಮಾನ ಹಾಗೂ ಗೌರವಾದರಗಳನ್ನು ಸಲ್ಲಿಸಿ, ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಹಾಗೂ ಅಧ್ಯಕ್ಷರು (ಸಚಿವ ದರ್ಜೆ) ಕನಿಷ್ಠ ವೇತನ ಸಲಹಾ ಮಂಡಳಿ, ಕರ್ನಾಟಕ ಸರ್ಕಾರ, ಟಿ.ಎಂ. ಶಾಹಿದ್ ತೆಕ್ಕಿಲ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಇಲಾಖೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಂಜಿ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ (SUDA) ಅಧ್ಯಕ್ಷರಾದ ಕೆ.ಎಂ. ಮುಸ್ತಫಾ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೃಷ್ಣಪ್ಪ, ಹಾಗೂ ಸುಳ್ಯ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದು, ನೂತನ ಅಧ್ಯಕ್ಷರಿಗೆ ಯಶಸ್ಸನ್ನು ಕೋರಿದರು.

Leave a Reply

Your email address will not be published. Required fields are marked *