AI ನಿರ್ಮಿತ ಚಿತ್ರ

ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಉದ್ದೇಶದಿಂದ, ಸುಳ್ಯ ಪೊಲೀಸ್ ಇಲಾಖೆಯ ವತಿಯಿಂದ ಮೇ 23ರಂದು ಸಂಜೆ 4 ಗಂಟೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ವಿಶೇಷ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಎಲ್ಲಾ ಧರ್ಮಗಳ ಮುಖಂಡರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಸಭೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಸುಳ್ಯ ಪೊಲೀಸರು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.







