ಸುಳ್ಯ: ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 18ರ ಶನಿವಾರದಂದು ಸುಳ್ಯ ತಾಲೂಕಿನ ಹಲವೆಡೆ ವಿದ್ಯುತ್ ಕಡಿತ ಉಂಟಾಗಲಿದೆ.

ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯ ತನಕ 11 ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಹಾಗೂ ಮಂಡೆಕೋಲು ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
🛒 Recommended for You:




