ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ವ್ಯಕ್ತಿಯೊಬ್ಬರು ದಿಢೀರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಗುರುವಾರ (ಏಪ್ರಿಲ್ 23) ಸಂಜೆ ಸಂಭವಿಸಿದೆ.

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆದರೆ, ಪ್ರಾಥಮಿಕ ಮಾಹಿತಿಯ ಪ್ರಕಾರ ಇವರು ಕೇರಳ ಮೂಲದವರು ಎಂದು ಶಂಕಿಸಲಾಗಿದೆ. ಘಟನೆಯ ಬಳಿಕ ಸುಳ್ಯದ ಎಸ್.ವೈ.ಎಸ್ (SYS) ಹಾಗೂ ಎಸ್.ಎಸ್.ಎಫ್ (SSF) ಆಂಬುಲೆನ್ಸ್ ಮೂಲಕ ಮೃತದೇಹವನ್ನು ತಕ್ಷಣವೇ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮಾಹಿತಿ ತಿಳಿದ ಕೂಡಲೇ ಸುಳ್ಯ ಪೊಲೀಸರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತರ ಹಿನ್ನೆಲೆ ಮತ್ತು ಸಾವಿಗೆ ನಿಖರ ಕಾರಣ ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.







