ದಿನಾಂಕ 2- 9-2025 ರಂದು ಸುಳ್ಯ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಮಕ್ಕಳ ಫುಟ್ ಬಾಲ್ ಪಂದ್ಯಾಟ ವು ಸರಕಾರಿ ಪ್ರೌಢ ಶಾಲೆ ಅಜ್ಜಾವರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯ ಎರಡೂ ಶಾಲೆಗಳ ಜಂಟಿ ಆಶ್ರಯದಲ್ಲಿ ಸೆ.2 ರಂದು ಅಜ್ಜಾವರ ಪ್ರೌಢ ಶಾಲಾ ಮೈದಾನ ದಲ್ಲಿ ಅದ್ದೂರಿಯಾಗಿ ನಡೆಯಿತು. ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಸಭಾ ಅಧ್ಯಕ್ಷತೆಯನ್ನು ಪ್ರೌಢ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರಕಾಶ್ ಕಣೆಮರಡ್ಕ , ಕಾರ್ಯಕ್ರಮದ ಉದ್ಘಾಟನೆ ಯನ್ನು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಕ್ರೀಡಾಂಗಣ ಉದ್ಘಾಟನೆಯನ್ನ ಅಜ್ಜಾವರ ಗ್ರಾಮಪಂಚಾಯತ್ ಅಧ್ಯಕ್ಷ ರಾದ ದೇವಕಿ ಪಲ್ಲತ್ತಡ್ಕ, ಹಾಗೂ ಉಪಾಧ್ಯಕ್ಷರಾದ ಅಬ್ದುಲ್ಲಾ ನೆರವೇರಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ರಾಹುಲ್ ಅಡ್ಪಂಗಾಯ, ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ಬಾಸ್ ಎ ಬಿ, ಪ್ರೌಢಶಾಲಾ ಎಸ್ಡಿಎಂಸಿ ಉಪಾಧ್ಯಕ್ಷರಾದ ಶೌಕತ್ ಅಲಿ, ನಿವೃತ್ತ ಶಿಕ್ಷಕರಾದ ಲೋಕಯ್ಯ ಗೌಡ ಅತ್ಯಾಡಿ, ನಿವೃತ್ತ ಶಿಕ್ಷಕ ಯಶೋಧರ ನಾರಾಲು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಣಿ ಸದಸ್ಯರಾಗಿರುವ ರಾಮಚಂದ್ರ ಪಲ್ಲತಡ್ಕ, ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚನಿಯ ಕಲ್ತಡ್ಕ, ಪ್ರತಾಪ ಯುವಕ ಮಂಡಲದ ಅಧ್ಯಕ್ಷರಾದ ಗುರುರಾಜ ಅಜ್ಜಾವರ, ಚೈತ್ರ ಯುವತಿ ಮಂಡಲದ ಅಧ್ಯಕ್ಷರಾದ ಶಶ್ಮಿ ಭಟ್ ಉಪಸ್ಥಿತರಿದ್ದರು ಪ್ರೌಢಶಾಲಾ ಮುಖ್ಯ ಗುರುಗಳಾದ ಗೋಪಿನಾಥ್ ಮೆತಡ್ಕ ಸ್ವಾಗತಿಸಿ ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಸುರೇಖಾರೈ ಒಂದರ ವಂದನಾರ್ಪಣೆ ಮಾಡಿದರು.ಕಾರ್ಯಕ್ರಮವನ್ನು ಶಿಕ್ಷಕರಾದ ನಿರಂಜನ ಎಂ ಜೆ, ಚಂದ್ರಶೇಖರ್ ಭಟ್, ಸಪ್ನಾ ನಿರೂಪಿಸಿದರು.

ಹದಿನಾಲ್ಕು ವಯಸ್ಸು ವಯೋಮಾನದ ಬಾಲಕರ ವಿಭಾಗದಲ್ಲಿ ಸೇಂಟ್ ಜೋಸೆಫ್ ಸುಳ್ಯ ಪ್ರಥಮ, ಗ್ರೀನ್ ವ್ಯೂ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಅಜ್ಜಾವರ ಪ್ರಥಮ, ಪ್ರಾಥಮಿಕ ಶಾಲೆ ಅಡ್ಪಂಗಾಯ ದ್ವಿತೀಯ, ಹದಿನೇಳು ವಯಸ್ಸು ವಯೋಮಾನದ ಬಾಲಕರ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಅಜ್ಜಾವರ ಪ್ರಥಮ, ಸ.ಜೂನಿಯರ್ ಕಾಲೇಜ್ ಸುಳ್ಯ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಅಜ್ಜಾವರ ಪ್ರಥಮ, ಗ್ರೀನ್ ವ್ಯೂ ದ್ವಿತೀಯ ಸ್ಥಾನ ಪಡೆದುಕೊಂಡಿತು.