ಬೆಂಗಳೂರು: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಹಾಗೂ ಹಣದಾಸೆಗೆ ಯುವಕ ಬಲಿ – ಕುಟುಂಬಸ್ಥರಿಂದ ತೀವ್ರ ಪ್ರತಿಭಟನೆ

ರಾಜಧಾನಿ ಬೆಂಗಳೂರಿನ ಯಶವಂತಪುರದಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಇಪ್ಪತ್ತೆರಡು ವರ್ಷದ ಶಹೀನ್ ಎಂಬ ಯುವಕ ಮೃತಪಟ್ಟಿರುವುದು ವರದಿಯಾಗಿದೆ. ಇನ್ಸುರೆನ್ಸ್ ಮತ್ತು ಮುಂಗಡ ಹಣಕ್ಕಾಗಿ ಆಸ್ಪತ್ರೆಯ ಸಿಬ್ಬಂದಿ ನಡೆಸಿದ ವಿಳಂಬ ಧೋರಣೆಯೇ ಈ ದುರಂತಕ್ಕೆ ಕಾರಣವೆಂದು ಆರೋಪಿಸಿ ಮೃತನ ಕುಟುಂಬಸ್ಥರು ಹಾಗೂ ಸ್ನೇಹಿತರು ಆಸ್ಪತ್ರೆ ಎದುರು ಆಕ್ರೋಶ ಹೊರಹಾಕಿದ್ದಾರೆ. ಕಫದ ಸೋಂಕು ಹಾಗೂ ಟಿಬಿ ಇರಬಹುದೆಂಬ ಶಂಕೆಯಿಂದ ವಿಪರೀತ ರಕ್ತವಾಂತಿ ಮಾಡಿಕೊಳ್ಳುತ್ತಿದ್ದ ಶಹೀನ್ ಅವರನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ […]

Read More