
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3 ರಂದು ಅಧಿಕಾರ ಸ್ವೀಕರಿಸಿದ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಮುಖ ರಾಜಕೀಯ ಮುಖಂಡರು ಮತ್ತು ಗಣ್ಯರು ಸಾಲಾಗಿ ಆಗಮಿಸಿದ್ದರು. ಈ ಭವ್ಯ ಸಮಾರಂಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಅಧ್ಯಕ್ಷರು (ಸಚಿವ ದರ್ಜೆ) ಕನಿಷ್ಠ ವೇತನ ಸಲಹಾ ಮಂಡಳಿ, ಕರ್ನಾಟಕ ಸರ್ಕಾರ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಸಹ ಪಾಲ್ಗೊಂಡಿದ್ದರು.
ಲೋಕಭವನದಲ್ಲಿ ನಡೆದ ಅಧಿಕೃತ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ಬಳಿಕ, ರಾಜಭವನದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ವಿಶೇಷ “ಚಹಾ ಕೂಟ”ದಲ್ಲಿ ಕೇರಳ ಮುಖ್ಯಮಂತ್ರಿ ವಿ ಡಿ ಸತೀಶನ್ ಮತ್ತಿತರ ಗಣ್ಯರ ಜೊತೆ (High-Tea) ಟಿ.ಎಂ. ಶಾಹಿದ್ ತೆಕ್ಕಿಲ್ ಪಾಲ್ಗೊಂಡರು








