ಬೆಂಗಳೂರು: ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ, ಹಿರಿಯ ಉದ್ಯಮಿ ಹಾಗೂ ಶಿಕ್ಷಣ ತಜ್ಞ ಎನ್. ವಿನಯ ಹೆಗ್ಡೆ ಅವರ ನಿಧನಕ್ಕೆ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರು (ಸಚಿವ ಸ್ಥಾನಮಾನ) ಆಗಿರುವ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಶೋಕ ಸಂದೇಶದಲ್ಲಿ ಕಂಬನಿ ಮಿಡಿದಿರುವ ಅವರು, “ವಿನಯ ಹೆಗ್ಡೆ ಅವರ ನಿಧನವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಶಿಕ್ಷಣ ಮತ್ತು ಸಮಾಜ ಸೇವೆಗೆ ಅವರು ನೀಡಿದ ಕೊಡುಗೆ ಅಪಾರವಾದುದು. ಭಗವಂತನು ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಸಮಾಜಕ್ಕೆ ಕರುಣಿಸಲಿ,” ಎಂದು ಪ್ರಾರ್ಥಿಸಿದ್ದಾರೆ.

ವಿನಯ ಹೆಗ್ಡೆ ಅವರು ಶಿಕ್ಷಣ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳನ್ನು ಸ್ಮರಿಸಿದ ಶಾಹಿದ್ ತೆಕ್ಕಿಲ್, ಮೃತರ ಗೌರವಾರ್ಥ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.


