ಅಂತರಂಗದ ಬೆಳಕೇ ನಿಜವಾದ ಶಿಕ್ಷಣ : ಕ್ಯಾ. ಗಣೇಶ್ ಕಾರ್ಣಿಕ್

ಶಿಕ್ಷಣವೆಂದರೆ ಬರಿಯ ಪುಸ್ತಕದ ಒಳಗಿನ ವಿಚಾರವಲ್ಲ. ಜ್ಞಾನದ ಹರವನ್ನು ಹೆಚ್ಚಿಸುವ ಜೀವನ ವಿಧಾನವಾಗಬೇಕು. ಸಣ್ಣ ಗ್ರಾಮ ಒಂದರಲ್ಲಿ ದಿವಂಗತ ಡಾ. ಕುರುಂಜಿಯವರು ಹಚ್ಚಿದ ಸಣ್ಣ ಹಣತೆಯೊಂದು ವಿಸ್ತಾರವಾಗಿ ಬೆಳೆದು ಜಗತ್ತಿನಾದ್ಯಂತ ಬೆಳಕು ಚೆಲ್ಲಿರುವುದು ಒಂದು ಅದ್ಭುತವೇ ಸರಿ. ಹಿರಿಯರ ಮಾರ್ಗದರ್ಶನ, ಶಿಸ್ತು, ಮೌಲ್ಯ, ಪ್ರೇರಣೆ ನಮಗೆ ಆದರ್ಶವಾಗಬೇಕಾಗಿದೆ. ವಿದ್ಯಾರ್ಥಿ ದೆಸೆಯಿಂದಲೇ ವ್ಯಕ್ತಿತ್ವ ನಿರ್ಮಾಣವಾಗಬೇಕು.

ಅಂತರಂಗದ ಬೆಳಕೇ ನಿಜವಾದ ಶಿಕ್ಷಣ ಎಂದು ಭಾರತೀಯ ಸೇನೆಯ ನಿವೃತ್ತ ಸೇನಾನಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಕ್ಟೋಬರ್ 24ನೇ ಶುಕ್ರವಾರದಂದು 2025-26ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಕಾರ್ಯದರ್ಶಿ ಹೇಮನಾಥ್ ಕೆ.ವಿ ಇವರು ಸ್ಪೂರ್ತಿದಾಯಕ ಮಾತುಗಳನ್ನಾಡಿ ಕಾಲೇಜಿನ ಸಮಗ್ರ ಅಭಿವೃದ್ಧಿಯನ್ನು ಬೆಳೆಸುವಲ್ಲಿ ವಿದ್ಯಾರ್ಥಿ ಸಂಘ ಬಹಳ ಮುಖ್ಯ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವೀಗೊಳಿಸಲು ಸಹಕರಿಸಿ ಎಂದು ಹೇಳುತ್ತಾ ನೂತನವಾಗಿ ಆಯ್ಕೆಗೊಂಡ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲಾನಾಧಿಕಾರಿ ರತ್ನಾವತಿ ಡಿ ವಿದ್ಯಾರ್ಥಿ ಸಂಘದ ಎಲ್ಲ ಪದಾಧಿಕಾರಿಗಳಿಗೆ ಪ್ರಮಾಣವಚನ ಭೋದಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶ ಸಂಯೋಜಕಿ ಡಾ. ಮಮತ ಕೆ ಅತಿಥಿಗಳನ್ನು ಪರಿಚಯಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕು. ಚಲನ ಟಿ, ಉಪಾದ್ಯಕ್ಷ ಹರ್ಷಿತ್ ಕೆ ಎಲ್, ಖಜಾಂಚಿ ಆದಿತ್ಯನ್ ತಮ್ಮ ಅಭಿಪ್ರಾಯ ಹಂಚಿಕೊಂಡರು. ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪವನ್, ಉಪಾಧ್ಯಕ್ಷ ದಿಶಾಂತ್ ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀಲಯ ಪ್ರಾರ್ಥಿಸಿ, ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ಅನಂತಲಕ್ಷ್ಮಿ ವಂದಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಭವ್ಯ ಮನು ಪೆರುಮುಂಡ ಕಾರ್ಯಕ್ರಮ ನಿರೂಪಿಸಿದರು.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ. ಇವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಅತ್ಯಂತ ವ್ಯವಸ್ಥಿತವಾಗಿ ಮೂಡಿಬಂದಿತ್ತು. ವಿದ್ಯಾರ್ಥಿ ಸಂಘದ ನಾಯಕರನ್ನು ವೈಯುಕ್ತಿಕ ಚಟುವಟಿಕೆಗಳನ್ನು ನೀಡಿ ಕೌಶಲ್ಯ ಸಾಮರ್ಥ್ಯದ ಮೇಲೆ ಆಯ್ಕೆ ಮಾಡಿದ್ದರು.
ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ನೆಹರೂ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ ಉಪಸ್ಥಿತರಿದ್ದರು.

ಕಾರ್ಯಕ್ರಮದ ಯಶಸ್ಸಿಗೆ ಕಾಲೇಜಿನ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

Leave a Reply

Your email address will not be published. Required fields are marked *