
ಪೆರಾಜೆ: ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ವತಿಯಿಂದ ರಾಜ್ಯಾಧ್ಯಕ್ಷರಾದ ಉನೈಸ್ ಪೆರಾಜೆ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಕನ್ನಡ ಪೆರಾಜೆ ಶಾಲೆಯ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು.
ಸಮಾಜಮುಖಿ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸುವ ನಿಟ್ಟಿನಲ್ಲಿ ಅಭಿಯಾನದ ವತಿಯಿಂದ ಈ ಶ್ಲಾಘನೀಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಮಕ್ಕಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ನೀಡುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ, ಸ್ಥಳೀಯ ಮಸೀದಿ ಅಧ್ಯಕ್ಷರಾದ ನಾಸಿರ್, ಹಿರಿಯ ವಿದ್ಯಾರ್ಥಿ ಸಂಘದ ಪ್ರಮುಖರಾದ ರವಿಚಂದ್ರ, ಸುಂದರ ಹಾಗೂ ಮೊಯಿದಿನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ಪೋಷಕರು ಭಾಗವಹಿಸಿ ಅಭಿಯಾನದ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.







