WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

News Politics

ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ

ಬಂಟ್ವಾಳ, ಸೆ. 2: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು.

ಜಿಲ್ಲಾಧ್ಯಕ್ಷೆ ಶಿನೀರ ಬಾನು ಧ್ವಜಾರೋಹಣ ನೆರವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ಸಭೆಯಲ್ಲಿ 2024–2026ರ ಅವಧಿಯಲ್ಲಿ ಸಂಘಟನೆಯ ವತಿಯಿಂದ ಹಮ್ಮಿಕೊಂಡ ವಿವಿಧ ಸಾಮಾಜಿಕ, ಮಹಿಳಾ ಸಬಲೀಕರಣ ಹಾಗೂ ಜನಪರ ಚಟುವಟಿಕೆಗಳ ವರದಿಯನ್ನು ಮಂಡಿಸಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಶಿನೀರ ಬಾನು, ಮಹಿಳೆಯರ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಸಂಘಟನೆಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದರು.

SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಎಸ್. ನಾಯಕತ್ವದ ಕುರಿತು ತರಬೇತಿ ನೀಡಿದರು. WIM ಕರ್ನಾಟಕ ರಾಜ್ಯ ಕಾರ್ಯದರ್ಶಿ ನಸ್ರಿಯ ಬೆಳ್ಳಾರೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಚುನಾವಣಾಧಿಕಾರಿಗಳಾದ ರಮ್ಲತ್ ಮಂಗಳೂರು ಹಾಗೂ ಝುಲೈಕ ಅವರ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಿನೀರ ಬಾನು ಅವರನ್ನು WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷೆಯಾಗಿ ಪುನರಾಯ್ಕೆ ಮಾಡಲಾಯಿತು.

ಅವರ ನೇತೃತ್ವದಲ್ಲಿ ಮುಂದಿನ ಅವಧಿಗೆ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು.

ನೂತನ ಪದಾಧಿಕಾರಿಗಳು:
ಜಿಲ್ಲಾಧ್ಯಕ್ಷೆ: ಶಿನೀರ ಬಾನು
ಪ್ರಧಾನ ಕಾರ್ಯದರ್ಶಿ: ಝರೀನಾ ಉಪ್ಪಿನಂಗಡಿ
ಉಪಾಧ್ಯಕ್ಷೆ: ಝಹನ
ಕಾರ್ಯದರ್ಶಿ: ನುಸೈಬ ಕಲ್ಲಡ್ಕ
ಕೋಶಾಧಿಕಾರಿ: ನೌರಿನ ಅಲಂಪಾಡಿ

ಸದಸ್ಯೆಯರು: ಶಮ ಉಜಿರೆ, ಝೈಬುನ್ನಿಸಾ ಬಿ.ಸಿ.ರೋಡ್, ಮರಿಯಮ್ಮ ಮೊಡಂತ್ಯಾರ್, ಗೌಸಿಯಾ ಪೊನ್ನೋಡಿ, ರುಬಿಯ ಬೆಳ್ತಂಗಡಿ, ಸನಾ ಸುಳ್ಯ, ಆಫ್ರಿನ್ ಬಂಟ್ವಾಳ ಹಾಗೂ ಮೆಹರು ಅಥೂರು.

ಝಹನ ಅಕ್ಕರಂಗಡಿ ಸ್ವಾಗತಿಸಿದರು. ಮುರ್ಷಿದ ಹಾಗೂ ಮುಸ್ಕಾನ್ ಕಾರ್ಯಕ್ರಮ ನಿರೂಪಿಸಿದರು. ನೂತನವಾಗಿ ಆಯ್ಕೆಯಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝರೀನಾ ಉಪ್ಪಿನಂಗಡಿ ವಂದಿಸಿದರು.

Leave a Reply

Your email address will not be published. Required fields are marked *