ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ವಿಶ್ವ ಹಿಂದೂ ಪರಿಷತ್ ಸದಸ್ಯ ಮಂಜು ಜೈನ್ ಅವರು ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಯ ನೀಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ಧರ್ಮಸ್ಥಳದ  ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. 

ಕಡೂರು ಪೊಲೀಸರು ಮಂಜು ಜೈನ್‌ರಿಂದ ದೂರು ಪಡೆದು ಉನ್ನತ ಅಧಿಕಾರಿಗಳ ನಿರ್ದೇಶನದಂತೆ ಮುಂದಿನ ಕ್ರಮಕ್ಕೆ ಕಡೂರು ಪೊಲೀಸರು ಮುಂದಾಗಲಿದ್ದಾರೆ. ಇನ್ನು ಜಿಲ್ಲೆಯ ಕಳಸ ಪಟ್ಟಣದಲ್ಲೂ ಜೈನ್ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

ಚಿಕ್ಕಮಗಳೂರು ನಗರದಲ್ಲೂ ಕೂಡ 2000ಕ್ಕೂ ಹೆಚ್ಚು ಜನ ಧರ್ಮಸ್ಥಳದ ಬಗ್ಗೆ ಪ್ರತಿಭಟನೆ ನಡೆಸಿ ಹಿಂದೂ ಧರ್ಮದ ಮೇಲೆ ದಬ್ಬಾಳಿಕೆ ಮಾಡಿ ಧರ್ಮಸ್ಥಳವನ್ನ ಅವಹೇಳನ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದರು.

Leave a Reply

Your email address will not be published. Required fields are marked *